ಚಿತ್ರದುರ್ಗ: ಉಗ್ರ ಹೋರಾಟದ ಎಚ್ಚರಿಕೆ ನೀಡಿದ
ಭಜರಂಗದಳ
ರಾಜ್ಯ ಸರ್ಕಾರ ಗೋ ಸಂರಕ್ಷಣಾ ಕಾಯ್ದೆಯನ್ನು
ಸಡಿಲಗೊಳಿಸುತ್ತಿರುವುದರ ವಿರುದ್ಧ ವಿಶ್ವ ಹಿಂದೂ ಪರಿಷತ್ ಮತ್ತು
ಬಜರಂಗದಳದ ಕಾರ್ಯಕರ್ತರು ಗುರುವಾರ ಜಿಲ್ಲಾಧಿಕಾರಿ ಕಚೇರಿ
ಬಳಿ ಪ್ರತಿಭಟನೆ ನಡೆಸಿದರು. ಸರ್ಕಾರದ ವಿರುದ್ಧ ಅಹೋರಾತ್ರಿ
ಧರಣಿ ಸತ್ಯಾಗ್ರಹವನ್ನು ಅಂತ್ಯಗೊಳಿಸಿ, ಹಿಂದೂಗಳ ಭಾವನೆಗೆ
ಧಕ್ಕೆ ತರುವ ಕೆಲಸವನ್ನು ಸರ್ಕಾರ ಮಾಡುತ್ತಿದ್ದು, ಇದನ್ನು
ಸಹಿಸಲು ಸಾಧ್ಯವಿಲ್ಲ. ಮುಂದಿನ ದಿನಗಳಲ್ಲಿ ಉಗ್ರ ಹೋರಾಟ
ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

About The Author

Namma Challakere Local News
error: Content is protected !!