ಜೀತ ಪದ್ಧತಿ ನಿರ್ಮೂಲನೆ ಜಾಗೃತಿ ಜಾಥಾದಲ್ಲಿ ನ್ಯಾಯಾಧೀಶ ಎಂ.ವಿಜಯ್ ಕಳವಳ


ಡಿಜಿಟಲ್ ವೇದಿಕೆಗಳಲ್ಲಿ ಆಧುನಿಕ ಜೀತ ಪದ್ಧತಿ: ಬದಲಾಗಿದೆ ಜೀತ ಪದ್ಧತಿಯ ಸ್ವರೂಪ


ಚಿತ್ರದುರ್ಗ :
ಬದಲಾಗುತ್ತಿರುವ ಕಾಲಘಟ್ಟಕ್ಕೆ ತಕ್ಕಂತೆ ಜೀತ ಪದ್ಧತಿಯ ಹೊಸ ಸ್ವರೂಪಗಳನ್ನು ಗುರುತಿಸಿ, ಅವುಗಳನ್ನು ಹತ್ತಿಕ್ಕುವ ಅಗತ್ಯವಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ವಿಜಯ್ ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ, ಕಾರ್ಮಿಕ ಇಲಾಖೆ ಹಾಗೂ ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದಲ್ಲಿ ಜೀತ ಪದ್ಧತಿ ನಿರ್ಮೂಲನಾ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಜೀತ ಪದ್ಧತಿ ನಿರ್ಮೂಲನಾ ಕಾಯಿದೆ-1976 ಜಾರಿಗೆ ಬಂದು 50 ವರ್ಷಗಳು ಪೂರೈಸಿರುವ ಹಿನ್ನೆಲೆಯಲ್ಲಿ ಕಾಯ್ದೆಯ ಮಹತ್ವ ತಿಳಿಸುವ ನಿಟ್ಟಿನಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಹೆಚ್ಚಿನ ಅರಿವು ಮೂಡಿಸಲಾಗುತ್ತಿದೆ. ಪ್ರಸ್ತುತ ಸಮಾಜದಲ್ಲಿ ಜೀತ ಪದ್ಧತಿಯು ‘ಆಧುನಿಕ ಗುಲಾಮಗಿರಿ’ ಸ್ವರೂಪ ಪಡೆದುಕೊಳ್ಳುತ್ತಿದೆ ಎಂದು ನ್ಯಾಯಾಧೀಶರು ಕಳವಳ ವ್ಯಕ್ತಪಡಿಸಿದರು.

ಜೀತ ಪದ್ಧತಿ ನಿರ್ಮೂಲನಾ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಜಾಗೃತಿ ಜಾಥಾವು ಚಿತ್ರದುರ್ಗ ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಿಂದ ಪ್ರಾರಂಭವಾಗಿ ಓನಕೆ ಓಬವ್ವ ವೃತ್ತ, ಮದಕರಿ ವೃತ್ತ, ಡಾ.ಬಿ.ಆರ್.ಅಂಬೇಡ್ಕರ್ ವೃತ್ತದ ಮಾರ್ಗದವಾಗಿ ಪುನಃ ಒನಕೆ ಓಬವ್ವ ವೃತ್ತಕ್ಕೆ ಆಗಮಿಸಿ, ಮಾನವ ಸರಪಳಿ ನಿರ್ಮಿಸಿ, “ಜೀತ ಬಿಡಿಸಿ ಶಾಲೆಗೆ ಕಳುಹಿಸಿ”, “ನಿಲ್ಲಿಸಿ ನಿಲ್ಲಿಸಿ ಜೀತಪದ್ಧತಿ ಕೊನೆಗೊಳಿಸಿ”, “ಜೀತಮುಕ್ತ ಕರ್ನಾಟಕ ಸುಂದರ ಕರ್ನಾಟಕ”, ಜೀತದಿಂದ ಮುಕ್ತಿ ಬದುಕಿಗೆ ಶಕ್ತಿ”, ಜೀತ ಆಧುನಿಕ ಕಾಲದ ಗುಲಾಮಿ ಪದ್ಧತಿ, ಇದಕ್ಕೆ ಬಡತನ, ಅನಕ್ಷರತೆ, ಅಸ್ಪøಶ್ಯತೆ ಕಾರಣ, “ಜೀತ ಪದ್ಧತಿ ತಡೆಗಟ್ಟಲು ಕೈಜೋಡಿಸಿ ಜೀತದಾಳುಗಳಿಗೆ ಮುಕ್ತಿ ನೀಡಿ”, “ಜೀತ ಪದ್ಧತಿ ಮಾನವ ಕುಲಕ್ಕೆ ಅಂಟಿದ ಶಾಪ ಬನ್ನಿ ಅದನ್ನು ಹೋಗಲಾಡಿಸಲು ಶ್ರಮಿಸೊಣ” ಎಂಬಿತ್ಯಾದಿ ಘೋಷಣೆಗಳನ್ನು ಕೂಗುವ ಮೂಲಕ ವಿದ್ಯಾರ್ಥಿಗಳು ಜಾಗೃತಿ ಮೂಡಿಸಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿ ಅನಿಲ್ ಬಗಟಿ ಅವರು ಅಧಿಕಾರಿಗಳಿಗೆ, ನೌಕರರಿಗೆ ಹಾಗೂ ಶಾಲಾ ವಿದ್ಯಾರ್ಥಿಗಳಿಗೆ ಜೀತ ಪದ್ಧತಿ ನಿರ್ಮೂಲನಾ ದಿನಾಚರಣೆಯ ಪ್ರತಿಜ್ಞೆ ಬೋಧಿಸಿದರು.
ಜಾಥಾದಲ್ಲಿ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಆರ್.ಮಂಜುನಾಥ್, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಚಿದಾನಂದಸ್ವಾಮಿ, ಆಹಾರ ಇಲಾಖೆ ಜಂಟಿ ನಿರ್ದೇಶಕ ಶಿದ್ರಾಮ ಮಾರಿಹಾಳ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಯೋಜನಾ ನಿರ್ದೇಶಕ ಪಿ.ಸತೀಶ್ ಕುಮಾರ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಇದ್ದರು.

About The Author

Namma Challakere Local News
error: Content is protected !!