ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ ರವರು ಚಿತ್ರದುರ್ಗ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ಚಿತ್ರದುರ್ಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಯೋಜನೆ ಮತ್ತು ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಡಿ ಸುಧಾಕರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಪಂಚಾಯತ್ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಪಾಲ್ಗೊಂಡು ಚಳ್ಳಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾಮಗಾರಿಗಳ ಹಾಗೂ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ವೆಂಕಟೇಶ್, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಳಾದ ಡಾ. ಅಶೋಕ್, ಪೋಲಿಸ್ ವರಿಷ್ಠಾಧಿಕಾರಿ ಗಳಾದ ರಂಜಿತ್ ಕುಮಾರ್ ಬಂಡಾರು, ಹೊಸದುರ್ಗ ಕ್ಷೇತ್ರದ ಶಾಸಕರು ಮತ್ತು ಆಹಾರ ನಿಗಮದ ಅಧ್ಯಕ್ಷರಾದ ಶ್ರೀಯುತ ಬಿ.ಜಿ. ಗೋವಿಂದಪ್ಪ ರವರು, ಹೊಳಲ್ಕೆರೆ ಶ್ರೀ ಡಾ. ಚಂದ್ರಪ್ಪ ರವರು, ಗ್ಯಾರೆಂಟಿ ಸಮಿತಿಯ ಜಿಲ್ಲಾ ಅಧ್ಯಕ್ಷರಾದ ಶ್ರೀ ಶಿವಣ್ಣ ರವರು, ಜಿಲ್ಲಾ ಮಟ್ಟದ ಎಲ್ಲಾ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

