ದೇಹದ ಆರೋಗ್ಯ ರಕ್ಷಣೆಯ ಜತೆಗೆ ಕಣ್ಣಿನ ಆರೋಗ್ಯವನ್ನೂ ಕಾಪಾಡಿಕೊಳ್ಳಬೇಕು ಪಟ್ಟಣ ಪಂಚಾಯತಿ ಅಧ್ಯಕ್ಷೆ ಟಿ .ಮಂಜುಳ ಶ್ರೀಕಾಂತ್.
ನಾಯಕನಹಟ್ಟಿ :
ನಾಯಕನಹಟ್ಟಿ ಪಟ್ಟಣ ಪಂಚಾಯಿತಿ ಸ್ವಯೋಗದೊಂದಿಗೆ ಮದರ್ ತೆರೇಸಾ ಗ್ರಾಮೀಣಾಭಿವೃದ್ಧಿ ಸಂಸ್ಥೆ (ರಿ). ನಾಯಕನಹಟ್ಟ, ಶ್ರೀ ಕಂಚಿ ಕಾಮಕೋಟಿ ಮೆಡಿಕಲ್ ಟ್ರಸ್ಟ್ ಶಂಕರ್ ಕಣ್ಣಿನ ಆಸ್ಪತ್ರೆ ಶಿವಮೊಗ್ಗ, ಸಮುದಾಯ ಆರೋಗ್ಯ ಕೇಂದ್ರ ನಾಯಕನಹಟ್ಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಚಿತ್ರದುರ್ಗ, ಜಿಲ್ಲಾ ಅಂಧತ್ವ ನಿಯಂತ್ರಣ ವಿಭಾಗ ಚಿತ್ರದುರ್ಗ ಜಿಲ್ಲೆ, ತಾಲ್ಲೂಕು ವೈದ್ಯಾಧಿಕಾರಿಗಳ ಕಛೇರಿ ಚಳ್ಳಕೆರೆ ಇವರ ಸಂಯುಕ್ತಾಶ್ರಯದಲ್ಲಿ ಹಾಗೂ ಕರವೇ ಕನ್ನಡ ಸೇನೆ ವತಿಯಿಂದ ಉಚಿತ ನೇತ್ರ ತಪಾಸಣಾ ಶಿಬಿರವನ್ನು ಮಂಗಳವಾರ ಹಮ್ಮಿಕೊಳ್ಳಲಾಯಿತು.
ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಟಿ. ಮಂಜುಳಾ ಶ್ರೀಕಾಂತ ಮಾತನಾಡಿ ನಾಯಕನಹಟ್ಟಿ ಹೋಬಳಿಯ ವ್ಯಾಪ್ತಿಗೆ ಬರುವ ಎಲ್ಲಾ ಹಳ್ಳಿಗಳ ಹಿರಿಯ ನಾಗರಿಕರರು ಒತ್ತಡದ ಜೀವನ, ಆಹಾರ ಕ್ರಮದಿಂದ ನಿತ್ಯ ಆರೋಗ್ಯದಲ್ಲಿ ಒಂದಲ್ಲಾ ಒಂದು ವೈಪರೀತ್ಯ ಕಾಣುತ್ತಿದ್ದೇವೆ. ಪ್ರತಿಯೊಬ್ಬರು ಎರಡ್ಮೂರು ತಿಂಗಳಿಗೆ ಒಂದು ಬಾರಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ದೇಹದ ಆರೋಗ್ಯ ರಕ್ಷಣೆಯ ಜತೆಗೆ ಕಣ್ಣಿನ ಆರೋಗ್ಯವನ್ನೂ ಕಾಪಾಡಿಕೊಳ್ಳಬೇಕು, ಹಾಗಾಗಿ ಮದರ್ ತೇರೆಸಾ ಸಂಸ್ಥೆ, ಕರವೇ ಕನ್ನಡ ಸೇನೆ ಇವರು ಆರೋಗ್ಯ ಸಂಬಂಧಿಸಿದ ಹೃದಯ ತಪಾಸಣೆ, ಕಣ್ಣಿನ ತಪಾಸಣೆ ಶಿಬಿರ ಜೊತೆಗೆ ಸಮಾಜಕ್ಕೆ ಒಳ್ಳೆ ಕಾಯಕ್ರಮಗಳನ್ನು ಮಾಡುತ್ತಿದ್ದಾರೆ ಅವರಿಗೆ ಅಭಿನಂದನೆಗಳು ತಿಳಿಸಿದರು.
ಪಟ್ಟಣ ಪಂಚಾಯಿತಿ ಸದಸ್ಯ ಎಂ.ಟಿ.ಮಂಜುನಾಥ್ ಜಾಗನೂರಹಟ್ಟಿ ಮಾತನಾಡಿದರು ಮದರ್ ತೆರೇಸಾ ಸಂಸ್ಥೆ ಮತ್ತು ಕರವೇ ಕನ್ನಡ ಸೇನೆ, ಶಂಕರ ಕಣ್ಣಿನ ಆಸ್ಪತ್ರೆ, ವತಿಯಿಂದ ಕಣ್ಣಿನ ತಪಾಸಣೆ ಶಿಬಿರವನ್ನು ಹಮ್ಮಿಕೊಂಡಿದ್ದು ಕಣ್ಣು ಮಾನವನ ದೇಹದ ಅತೀ ಸೂಕ್ಷ್ಮವಾದ ಅಂಗ. ಇದನ್ನು ಅತೀ ಜಾಗರೂಕತೆಯಿಂದ ಕಾಪಾಡಿಕೊಳ್ಳಬೇಕು. ಬಡ ಜನರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರಗಳು ಅನುಕೂಲವಾಗಿವೆ, ಆರೋಗ್ಯ ಶಿಬಿರಗಳಲ್ಲಿ ಎಲ್ಲಾರು ಭಾಗಿವಹಿಸುವ ಮುಖಾಂತರ ಸದುಪಯೋಗ ಪಡೆದುಕೊಳ್ಳುಬೇಕು ಎಂದರು.
ಈ ಸಂದರ್ಭದಲ್ಲಿ ಪಟ್ಟಣ ಪಂಚಾಯ್ತಿ ಉಪಾದ್ಯಕ್ಷೆ ಬೋಸಮ್ಮ ಮಂಜುನಾಥ, ಸ್ಥಾಯಿ ಸಮಿತಿ ಅಧ್ಯಕ್ಷ ಸೈಯದ್ ಅನ್ವರ್, ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ಓ. ಶ್ರೀನಿವಾಸ, ಮದರ್ ತೆರೇಸಾ ಗ್ರಾಮೀಣ ಸಂಸ್ಥೆ ಅಧ್ಯಕ್ಷ ಬಿ.ನಾಗರಾಜ, ಶಿವಮೂರ್ತಿ, ಯನ್ನಪ್ಪ, ಕರವೇ ಕನ್ನಡ ಸೇನೆ ತಾಲ್ಲೂಕು ಅಧ್ಯಕ್ಷ ಮುತ್ತಯ್ಯ, ಹೋಬಳಿ ಘಟಕ ಅಧ್ತಕ್ಷ ಕೆ.ಜಿ.ಮಂಜುನಾಥ, ತಿಪ್ಪೇಸ್ವಾಮಿ ,ಪ್ರೇಮ್, ಶಂಕರ್ ಕಣ್ಣಿನ ಆಸ್ಪತ್ರೆ ಡಾll ಕೀರ್ತಿ, ತ್ಯಾಗರಾಜ್, ಪಟ್ಟಣ ಪಂಚಾಯ್ತಿ ಸಿಬ್ಬಂದಿ ಸಂದೀಪ್, ತಿಪ್ಪೇಶ್, ಮಧು ಇನ್ನು ಮುಂತಾದವರು

