ಪ್ರತಿಯೊಬ್ಬ ವಿದ್ಯಾರ್ಥಿಯು ಹೆತ್ತವರಿಗೆ ಕೀರ್ತಿ ತರುವ ಹಾಗೆ ಶಿಕ್ಷಣವನ್ನು ಪಡೆಯಬೇಕು ಪಿ ಎಸ್ ಐ ಪಾಂಡುರಂಗಪ್ಪ.
ನಾಯಕನಹಟ್ಟಿ:: ವಿದ್ಯಾರ್ಥಿಗಳು ಬಾಲ್ಯ ವಿವಾಹ ಕಂಡುಬಂದರೆ 1098 ಸಂಖ್ಯೆಗೆ ಕರೆ ಮಾಡಿ ಎಂದು ಪಿಎಸ್ಐ ಪಾಂಡುರಂಗಪ್ಪ ಹೇಳಿದರು.
ಗುರುವಾರ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪಟ್ಟಣದ ವಿದ್ಯವಿಕಾಸ ಶಾಲೆಯ ವಿದ್ಯಾರ್ಥಿಗಳಿಗೆ ತೆರೆದ ಮನೆ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಕುರಿತು ಮಾತನಾಡಿದರು. ಪೊಲೀಸ್ ಠಾಣೆಯಲ್ಲಿ ವಿದ್ಯಾರ್ಥಿಗಳು ಸಾರ್ವಜನಿಕರಿಗೆ ಠಾಣೆಯಲ್ಲಿ ಅಧಿಕಾರಿಗಳ ಬಗ್ಗೆ ಮತ್ತು ಠಾಣೆಯಲ್ಲಿ ಸಿಗುವ ಸೌಲಭ್ಯಗಳ ಬಗ್ಗೆ ನೀಡಿದರು ವಿದ್ಯಾರ್ಥಿಗಳಿಗೆ ತಾಳ್ಮೆ ಸಹನೆ ಸಮಯ ಪ್ರಜ್ಞೆ ಮುಖ್ಯ ಶಾಲೆಯಲ್ಲಿ ಶಿಕ್ಷಕರು ಹೇಳಿಕೊಡುವ ಪಾಠವನ್ನ ಪ್ರತಿಯೊಬ್ಬ ವಿದ್ಯಾರ್ಥಿಯು ತಿಳಿದುಕೊಳ್ಳಬೇಕು ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಹೊಡೆಯುವ ಮೂಲಕ ಹೆತ್ತವರಿಗೆ ಕೀರ್ತಿ ತರುವ ಹಾಗೆ ಶಿಕ್ಷಣವನ್ನ ಪಡೆಯಬೇಕು ಸಮಾಜದಲ್ಲಿ ಹಿರಿಯರಿಗೆ ಗೌರವ ನೀಡಬೇಕು ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ಬದುಕಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ತಿಳಿಸಿದರು.
ಈ ಸಂದರ್ಭದಲ್ಲಿ ಎಎಸ್ಐ ತಿಪ್ಪೇಸ್ವಾಮಿ, ದಾದಾಪೀರ್, ಸಿಬ್ಬಂದಿಗಳಾದ ಅಣ್ಣಪ್ಪನಾಯ್ಕ, ಲೋಹಿತ್, ದೇವರಾಜ್ ಕೋಟೆ, ಕುಮಾರ್, ವೀರೇಶ್, ಮಹಿಳಾ ಪೇದೆ ಲಕ್ಷ್ಮೀದೇವಿ, ಸೇರಿದಂತೆ ಪಟ್ಟಣದ ವಿದ್ಯಾವಿಕಾಸ ಶಾಲೆಯ ವಿದ್ಯಾರ್ಥಿ- ವಿದ್ಯಾರ್ಥಿನಿಯರು ಇದ್ದರು

