ಚಳ್ಳಕೆರೆ :

ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ವತಿಯಿಂದ ಚಿತ್ರದುರ್ಗ ನಗರದ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಸಭಾಂಗಣದಲ್ಲಿ ಯೋಜನೆ ಮತ್ತು ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಜಿಲ್ಲಾ ಸಹಕಾರ ಬ್ಯಾಂಕ್ ಅಧ್ಯಕ್ಷರಾದ ಡಿ.ಸುಧಾಕರ್ ರವರ ಅಧ್ಯಕ್ಷತೆಯಲ್ಲಿ ನಡೆದ ಬ್ಯಾಂಕ್ ಆಡಳಿತ ಮಂಡಳಿಯ ಸಭೆಯಲ್ಲಿ

ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ
ಪಾಲ್ಗೊಂಡು ವಿವಿಧ ವಿಷಯಗಳ ಬಗ್ಗೆ ಚರ್ಚಿಸಿದರು.

ಈ ಸಂದರ್ಭದಲ್ಲಿ ಬ್ಯಾಂಕ್ ಉಪಾಧ್ಯಕ್ಷರಾದ ಮಂಜುನಾಥ್, ನಿರ್ದೇಶಕ ಸೂರನಹಳ್ಳಿ ಕೆ.ಜಗದೀಶ್,
ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕರಾದ ಇದಾಯತ್ ಉಲ್ಲಾ, ಬ್ಯಾಂಕ್ ನಿರ್ದೇಶಕರುಗಳು, ಬ್ಯಾಂಕ್ ಆಡಳಿತ ಮಂಡಳಿ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

About The Author

Namma Challakere Local News
error: Content is protected !!